ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ( Dasara ) ಹಾಗೂ ದೀಪಾವಳಿ ಗಿಫ್ಟ್ ( Deepavali Gift ) ಎನ್ನುವಂತೆ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಲಾಗಿತ್ತು. ಇದೀಗ ಸಿಎಂ ಬೊಮ್ಮಾಯಿಯವರು ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ( Dearness Allowance - DA ) ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ.
ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಭರ್ಜರಿ ಸಿಹಿಸುದ್ದಿಯನ್ನು ನೀಡಿದ್ದಾರೆ.
ಈ ಕುರಿತಂತೆ ಸಿಎಂ ಟ್ವಿಟ್ಟರ್ ಖಾತೆಯಿಂದ ಟ್ಟಿಟ್ ಮಾಡಿ ಮಾಹಿತಿ ನೀಡಲಾಗಿದ್ದು, ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ) ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ( DA Hike ) ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ ಎಂದು ತಿಳಿಸಿದೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.
— CM of Karnataka (@CMofKarnataka)