15000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (GPTR) ನೇಮಕಾತಿಯ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿ ನ.18 ರಂದು ಪ್ರಕಟ: ಸಚಿವ ಶ್ರೀ ಬಿ.ಸಿ.ನಾಗೇಶ್

15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (Primary School Teacher Recruitment) ಪರೀಕ್ಷೆಯ 1:1 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಾಳೆ ದಿನಾಂಕ: 18-11-2022 ರಂದು ಸಂಜೆ 6 ಗಂಟೆಗೆ ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶ್ರೀ ಬಿ.ಸಿ ನಾಗೇಶ್ (B C Nagesh) ಮಾಹಿತಿ ನೀಡಿದ್ದಾರೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (GPTR) ನೇಮಕಾತಿಯ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿ ನಾಳೆ ಪ್ರಕಟ: ಸಚಿವ ಬಿ.ಸಿ.ನಾಗೇಶ್

ಕಳೆದ ಸೆಪ್ಟೆಂಬರ್ 27 ರಂದು 1:2 ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಪಟ್ಟಿ ಬಿಡುಗಡೆಗೊಳಿಸಿ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ.

✅ 1:1 ಆಯ್ಕೆ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಶಿಕ್ಷಕರ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ (Selection List For Recruitment) ಸಿದ್ಧಪಡಿಸಿದ್ದು, ಇದೀಗ ಸಚಿವರೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದು, ನಾಳೆ ದಿನಾಂಕ: 18 ನವೆಂಬರ್ 2022 ರಂದು ಸಂಜೆ 6 ಗಂಟೆಗೆ ಇಲಾಖೆ ವೆಬ್ ಸೈಟ್ ನಲ್ಲಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

 

✅ 1:1 ಆಯ್ಕೆ ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ.
Previous Post Next Post